ಕರಾವಳಿ
ಹಿಜಾಬ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ಸಹೋದರನಿಗೆ ಹಲ್ಲೆ ಪ್ರಕರಣಕ್ಕೆ ಅನ್ಯಧರ್ಮ ಹುಡುಗಿಯರ ಗೆಳೆತನ ಹಲ್ಲೆಗೆ ಕಾರಣ ವಾಯಿತು ?

ಮಲ್ಪೆ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ದಾಳಿ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ಮಲ್ಪೆ ಪೇಟೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯ ತಂದೆ ಹೈದರ್ ಅಲಿ ಎಂಬವರ ಬಿಸ್ಮಿಲ್ಲಾ ಹೊಟೆಲ್ ಮೇಲೆ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿ, ಸಹೋದರ ಸೈಪ್(20) ಗೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಹಲ್ಲೆಗೊಳಗಾಗಿ ಗಾಯಗೊಂಡಿರುವ ಸೈಫ್ ನನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಮಲ್ಪೆ ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸೈಫ್ ಗೆ ಅನ್ಯಧರ್ಮ ಹುಡುಗಿಯರ ಜೊತೆ ಇದ್ದ ಗೆಳೆತನವೇ ದಾಳಿಗೆ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.