ಕರಾವಳಿ
ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆಯ ಮನೆಗೆ ನುಗ್ಗಿ ಪತಿಯ ಮೇಲೆ ಹಲ್ಲೆಗೈದ ಯುವಕ.

ಮಣಿಪಾಲ : ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ಕಬ್ಬಿಣದ ರಾಡ್ ನಂತಿರುವ ವಸ್ತುವಿನಿಂದ ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಇಂದು ಅಲೆವೂರು ಸಮೀಪ ಸಂಭವಿಸಿದೆ.
ತೀವ್ರವಾಗಿ ಗಾಯಗೊಂಡಿರುವ ಕೃಷ್ಣ ನಾಯ್ಕ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಗೈದ ಆರೋಪಿ ಅರ್ಜುನ್ (23) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವೈಯಕ್ತಿಕ ಕಲಹದ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿದ ನೆರೆಮನೆಯ ಅರ್ಜುನ್ ಇತ್ತೀಚಿಗಷ್ಟೇ ಗೃಹಪ್ರವೇಶವಾದ ಮನೆಯಲ್ಲಿ ಗೇಟ್ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ನಾಯ್ಕ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದರ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ