ರಾಜ್ಯ
15,000 ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇದ್ದವರಿಗೆ ಸಿಹಿ ಸುದ್ದಿ. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
6ರಿಂದ 8ನೇ ತರಗತಿ ಶಿಕ್ಷಕರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಶೇಕಡ 1 ಮೀಸಲಾತಿ ಕಲ್ಪಿಸಲಾಗಿದೆ.
ಶಿಕ್ಷಕರ ಕೊರತೆಯಿಂದ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿರುವುದನ್ನು ಮನಗಂಡಿರುವ ಸರ್ಕಾರ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ