ಕರಾವಳಿ
ಮಣಿಪಾಲ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್

ಮಣಿಪಾಲ : ಮಣಿಪಾಲದಲ್ಲಿ ಇಂದು ನಡು ರಸ್ತೆಯಲ್ಲೇ ಬಸ್ ಒಂದು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಫೆ. 23ರ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತಿದ್ದ ಖಾಸಗಿ ಬಸ್ ನಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿತು. ಈ ವೇಳೆ ಬೆಂಗಳೂರಿನಿಂದ ಮಣಿಪಾಲಕ್ಕೆ ಆಗಮಿಸಿದ್ದ ಪ್ರಯಾಣಿಕರನ್ನು ಕೆಳಕ್ಕಿಳಿಸಲಾಯಿತು. ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಇಡೀ ಬಸ್ ಗೆ ಆವರಿಸಿ ಬಸ್ ಬೆಂಕಿಗಾಹುತಿಯಾಯಿತು.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.