ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇವರ ಆಶ್ರಯದಲ್ಲಿ ನಗರ ಬಿಜೆಪಿ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ ಮಣಿಪಾಲದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಆಯೋಜಿಸಲಾದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ದ ಉದ್ಘಾಟನೆಯನ್ನು ಇಂದು ದಿನಾಂಕ 24-02-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಆಯೋಜಿಸಿದ ನಗರ ಬಿಜೆಪಿಯವರಿಗೆ ಮತ್ತು ನಗರ ಬಿಜೆಪಿಯ ಎಲ್ಲಾ ಮೋರ್ಚಾದವರಿಗೆ ಹಾಗೂ ಸ್ವಯಂ ಪ್ರೇರಣೆಯಿಂದ ರಕ್ತ ದಾನ ಮಾಡುತ್ತಿರುವ ರಕ್ತದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅಂಡಾರು ದೇವಿ ಪ್ರಸಾದ್, ರತ್ನಾಕರ್ ಇಂದ್ರಾಳಿ, ಉಮೇಶ್ ನಾಯ್ಕ್, ಸಲೀಂ ಅಂಬಾಗಿಲು, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಟ್ಯಾಕ್ಸಿಮೆನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಕೋಟ್ಯಾನ್, ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್, ಲಾರಿ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಶೆಟ್ಟಿ, ಮಣಿಪಾಲ ರಕ್ತನಿಧಿ ವಿಭಾಗದ ಮುಖ್ಯಸ್ಥರಾದ ಡಾll. ಶಮಿ ಶಾಸ್ತ್ರಿ ಮತ್ತು ಶಾಸಕರ ಧರ್ಮಪತ್ನಿ ಶಿಲ್ಪಾ ಆರ್ ಭಟ್, ಮಗನಾದ ರಾಹುಲ್, ರೆಯ್ಯಾನ್ಶ್ ಮತ್ತು ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.