ಉಕ್ರೇನ್‌ನಲ್ಲಿರುವ 10 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಪ್ರಯತ್ನ’ – ಸಿಎಂ ಬೊಮ್ಮಾಯಿ

ಬೆಂಗಳೂರು, : ಉಕ್ರೇನ್‌ನಲ್ಲಿರುವ ಕರ್ನಾಟಕದ 10 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿ ಕರೆತರುವಂತ ಕಾರ್ಯದಲ್ಲಿ ಸರ್ಕಾರ ನಿರತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಸಿಲುಕಿರುವಂತ ಕರ್ನಾಟಕದ 10 ವಿದ್ಯಾರ್ಥಿಗಳು ಸೇರಿ 100 ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಭಾರತೀಯ ರಾಯಭಾರ ಕಚೇರಿಯ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ರಾಜ್ಯದ ವಿದ್ಯಾರ್ಥಿಗಳ ಕುರಿತಂತೆ ವಿದೇಶಾಂಗ ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ನಿಸಲಾಗುತ್ತಿದೆ ಎಂದರು.
ಇನ್ನು ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳೊಂದಿಗೆ ಭಾರತೀಯ ದೂತವಾಸ ಕಚೇರಿ ಸಂಪರ್ಕದಲ್ಲಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಾಸ್ ಕರೆತರುವ ಎಲ್ಲಾ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.