ಅಂತಾರಾಷ್ಟ್ರೀಯ
ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಮುಂಜಾನೆ 5.30ರ ಹೊತ್ತಿಗೆ ಭೂಮಿ ಕಂಪಿಸಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3ರಷ್ಟು ದಾಖಲಾಗಿದೆ.
ಪೋರ್ಟ್ ಬ್ಲೇರ್ ನಿಂದ 165 ಕಿಲೋ ಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂ ಗರ್ಭ ಅಧ್ಯಯನ ಕೇಂದ್ರ ವರದಿಯಲ್ಲಿ ತಿಳಿಸಿದೆ.
ಭೂಕಂಪದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.