ರಾಜ್ಯ
ಮಂಗಳೂರು: NIA ಕಚೇರಿ ಆರಂಭಿಸುವ ಬಗ್ಗೆ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ.!

ಮಂಗಳೂರು : ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಶುಕ್ರವಾರ ನಗರದ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ರಾಜ್ಯದಲ್ಲಿ ಈಗಾಗಲೇ ಒಬ್ಬ ದಕ್ಷತೆಯ ನಾಯಕನನ್ನು ಗೃಹ ಸಚಿವರನ್ನಾಗಿ ಮಾಡಲಾಗಿದೆ. ಅವರು ಈಗಾಗಲೇ ಎರಡು ಸಭೆ ಮಾಡಿದ್ದು, ಮುಂದೆಯೂ ಕೆಲ ಸಭೆ ನಡೆಯಲಿದೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಕರಾವಳಿಗೆ ಭೇಟಿ ಕೊಟ್ಟು ಪರಿಶೀಲಿಸಲಿದ್ದಾರೆ. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ತೇವೆ” ಎಂದು ಹೇಳಿದ್ದಾರೆ.
ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ” ಎಂದು ಹೇಳುವ ಮೂಲಕ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸುಳಿವು ನೀಡಿದ್ದಾರೆ.