ಕರಾವಳಿ

ನಮೋ ರಾಜ ಮಾಣಿಕ್ಯ” ನಾಟಕ ಪ್ರದರ್ಶನ  ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇವರ ಆಶ್ರಯದಲ್ಲಿ ಎಂ.ಜಿ.ಎಂ ಕಾಲೇಜು ಮುದ್ದಣ್ಣ ಮಂಟಪದಲ್ಲಿ  ದಿನಾಂಕ 28-02-2022 ರಂದು ನಡೆಯುತ್ತಿರುವ “ನಮೋ ರಾಜ ಮಾಣಿಕ್ಯ” ನಾಟಕ ಪ್ರದರ್ಶನವನ್ನು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ದಾವೂದ್ ಅಬುಬಕ್ಕರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನಾಟಕದ ರಂಗ ಕಲ್ಪನೆ ಮತ್ತು ನಿರ್ದೇಶಕರಾದ ಗಣೇಶ್ ರಾವ್ ಎಲ್ಲರು, ನಾಟಕ ರಚನಾಕಾರಾದ ಡಾ. ಮಂಜುನಾಥ್ ಕರಬ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಹಾಗೂ ಪಕ್ಷದ ಹಿರಿಯರು ಮುಖಂಡರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ನಗರಸಭೆಯ ಸದಸ್ಯರಾದ ಗಿರೀಶ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!