ಅಂತಾರಾಷ್ಟ್ರೀಯ

ಉಕ್ರೇನ್ ನಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

ಮಾಸ್ಕೊ: ಅಂತಾರಾಷ್ಟ್ರೀಯ ಒತ್ತಡಕ್ಕೆ ಕೊನೆಗೂ ಮಣಿದಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಉಕ್ರೇನ್ ನಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆ ಮಾಡಿದ್ದಾರೆ.

ಉಕ್ರೇನ್ ನಲ್ಲಿ ಸಿಲುಕಿರುವ ವಿದೇಶಿ ನಾಗರಿಕರ ಸುರಕ್ಷಿತ ನಿರ್ಗಮನ ನಿಟ್ಟಿನಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದೆ ಎಂದು ವರದಿಯಾಗಿದೆ.

ಎಷ್ಟು ಗಂಟೆಗಳ ಕಾಲ ಕದನ ವಿರಾಮ ಜಾರಿಯಲ್ಲಿ ಇರಲಿದೆ ಎಂಬುದು ತಿಳಿದು ಬಂದಿಲ್ಲ. ಇದು ತಾತ್ಕಾಲಿಕ ಕದನ ವಿರಾಮ ವಾಗಿದೆ.

ಇದರಿಂದಾಗಿ ಉಕ್ರೇನ್ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಇದರಿಂದ ಸಾಧ್ಯವಾಗಲಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!