ರಾಷ್ಟ್ರೀಯ
ದೆಹಲಿ ನ್ಯಾಯಾಲಯದ ಆವರಣದಲ್ಲಿ ಶೂಟೌಟ್

ನವದೆಹಲಿ: ರಾಜಧಾನಿ ದೆಹಲಿಯ ನ್ಯಾಯಾಲಯದ ಆವರಣದಲ್ಲಿ ಗ್ಯಾಂಗ್ ವಾರ್ ನಡೆದಿದೆ. ಮೂರು ಮಂದಿ ದುಷ್ಕರ್ಮಿಗಳು ಪಾತಕಿ ಜಿತೇಂದರ್ ಗೋಗಿ ಮೇಲೆ ಗುಂಡಿನ ದಾಳಿ ನಡೆಸಿದರು.
ಇದೇ ವೇಳೆ ಪೊಲೀಸರು ನಡೆಸಿದ ಪ್ರತಿದಾಳಿಗೆ ಮೂವರು ದುಷ್ಕರ್ಮಿಗಳು ಮೃತಪಟ್ಟಿದ್ದಾರೆ.
ದುಷ್ಕರ್ಮಿಗಳು ವಕೀಲರ ವೇಷದಲ್ಲಿ ನ್ಯಾಯಾಲಯಕ್ಕೆ ಬಂದಿದ್ದರು ಎಂದು ವರದಿಯಾಗಿದೆ. ಮೃತಪಟ್ಟಿರುವ ಜಿತೇಂದರ್ ಗೋಗಿ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ.
ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ.