ರಾಜ್ಯ
ನೈಸ್ ರಸ್ತೆಯಲ್ಲಿ ಹೊತ್ತಿ ಉರಿದ ಕಾರು.!

ಬೆಂಗಳೂರು: ಶನಿವಾರ ತಡರಾತ್ರಿ ನಗರದ ನೈಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದು ವ್ಯಕ್ತಿಯೊಬ್ಬರು ಸಜೀವ ದಹನವಾಗಿದ್ದಾರೆ.
ಬೆಂಗಳೂರಿನ ನೈಸ್ ರಸ್ತೆಯ ಚನ್ನಸಂದ್ರದ ಬಳಿ ಇ ದುರಂತ ಸಂಭವಿಸಿದೆ. ಸ್ಥಳೀಯರು ನೈಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ನೈಸ್ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿದ್ದ ದರ್ಶನ್ (40) ಸುಟ್ಟು ಕರಕಲಾಗಿದ್ದು, ಆರ್. ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಡಿಸಿಪಿ ಸವಿತಾ ಅವರು ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಅನುಮಾನವಿದೆ. ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.