ಕರಾವಳಿ
ಶಾಲೆಗಳಲ್ಲಿ ಯಕ್ಷಗಾನ ತರಬೇತಿ ಆರಂಭ – ಮುಖ್ಯೋಪಾಧ್ಯಾಯರೊಂದಿಗೆ ಶಾಸಕ ಸಭೆ

ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡಲಾಗುತ್ತಿದ್ದು, 2021- 22 ನೇ ಸಾಲಿನಲ್ಲಿ ಆಸಕ್ತರಿರುವ ಪ್ರೌಢಶಾಲೆಗಳಲ್ಲಿ ಯಕ್ಷಗಾನ ತರಬೇತಿ ಆರಂಭಿಸುವ ಬಗ್ಗೆ ಇಂದು ದಿನಾಂಕ 30-11-2021 ರಂದು ಉಡುಪಿ ಬೋರ್ಡ್ ಹೈಸ್ಕೂಲಿನಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ವಿವಿಧ ಪ್ರೌಢಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಟ್ರಸ್ಟಿಗಳಾದ ಎಸ್.ವಿ ಭಟ್, ನಾರಾಯಣ ಹೆಗ್ಡೆ ಉಪಸ್ಥಿತರಿದ್ದರು.