ಕರಾವಳಿ
ದ.ಕ. ಜಿಲ್ಲಾಧಿಕಾರಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ…!

ಮಂಗಳೂರು: ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ, ಈ ಬಾರಿಯ ಸ್ವಾತಂತ್ರ್ಯೋತ್ಸವ ಆಚರಣೆಗೆ ದ.ಕ ಜಿಲ್ಲಾಡಳಿತ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಸಾರ್ವಜನಿಕರು ಶಿಷ್ಟಾಚಾರ ಪಾಲಿಸಿ ಸ್ವಾತಂತ್ರ್ಯೋತ್ಸವನ್ನು ಜವಾಬ್ದಾರಿಯುತವಾಗಿ ಆಚರಿಸಲು ಸೂಚನೆ ನೀಡಿದ್ದಾರೆ.
ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಧ್ವಜಾರೋಹಣ ಸ್ಥಳದಲ್ಲಿ ಹೆಚ್ಚು ಜನ ಸೇರಿಸದೇ ಸ್ವಾತಂತ್ರ್ಯ ದಿನಾಚರಣೆಯ ಘನತೆಗೆ ಧಕ್ಕೆ ಬಾರದಂತೆ ಆಚರಿಸಲು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದೆ.