ಕರಾವಳಿ
ಹೈಕೋರ್ಟ್‌ನ ತೀರ್ಪು ಸ್ವಾಗತಾರ್ಹ ಮತ್ತು ಸಮಾಜಕ್ಕೆ ಅತ್ಯುತ್ತಮ ಸಂದೇಶ- ಮಟ್ಟಾರ್

ಉಡುಪಿ : ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಇಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ಸ್ವಾಗತಿಸಿದ್ದಾರೆ.
ಹೈಕೋರ್ಟ್‌ನ ತೀರ್ಪನ್ನು ಸ್ವಾಗತಿಸಿ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಹಿಜಾಬ್ ಪ್ರಕರಣದ ಬಗ್ಗೆ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ರಾಜ್ಯ ಹೈಕೋರ್ಟ್‌ನ ತ್ರಿಸದಸ್ಯರ ಪೀಠ ನೀಡಿದ ತೀರ್ಪು ಅತ್ಯಂತ ಉಲ್ಲೇಖನಿಯ, ಸ್ವಾಗತಾರ್ಹ ಮತ್ತು ಸಮಾಜಕ್ಕೆ ಅತ್ಯುತ್ತಮ ಸಂದೇಶ ಎಂದು ಹೇಳಿದ್ದಾರೆ.