ರಾಜ್ಯ
ನಟ , ನಿರ್ದೇಶಕ ಎಸ್ ನಾರಾಯಣ್ ಕಾಂಗ್ರೆಸ್ ಗೆ ಸೇರ್ಪಡೆ

ಬೆಂಗಳೂರು: ನಟ , ನಿರ್ದೇಶಕ ಎಸ್ ನಾರಾಯಣ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಅವರು ಪಕ್ಷ ಸೇರಿದ್ದಾರೆ.
ಬಳಿಕ ಮಾತನಾಡಿದ ನಾರಾಯಣ್, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮೆಚ್ಚಿ ಪಕ್ಷ ಸೇರಿದ್ದೇನೆ ಎಂದು ಹೇಳಿದರು. ಸಮಾಜದ ಸರ್ವ ಜನರ ಕಲ್ಯಾಣ ಬಯಸುವ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.