ಕರಾವಳಿ
ಉಡುಪಿ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು..!

ಉಡುಪಿ : ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೊಡಂಕೂರಿನ ಪಿ. ಉದಯ್ ರಾವ್ ಎಂಬವರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ವಿಪರೀತ ಮದ್ಯವ್ಯಸನದಿಂದಾಗಿ ಜೀವನದಲ್ಲಿ ಬೇಸತ್ತು ಪಿ. ಉದಯ್ ರಾವ್(74) ಅವರು ಮಾ.8 ರಂದು ಕೀಟನಾಶಕವನ್ನು ಸೇವಿಸಿ, ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.