ಕರಾವಳಿತಾಜಾ ಸುದ್ದಿಗಳು
ಕೇಂದ್ರ ಸರ್ಕಾರದ ಇ – ಶ್ರಮ ಯೋಜನೆಯ ನೋಂದಣಿ ಶಿಬಿರ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇವರ ಆಶ್ರಯದಲ್ಲಿ ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ನಲ್ಲಿ ಇಂದು ದಿನಾಂಕ 02-10-2021 ರಂದು ಆಯೋಜಿಸಿರುವ ಕೇಂದ್ರ ಸರ್ಕಾರದ ಇ – ಶ್ರಮ ಯೋಜನೆಯ ನೋಂದಣಿ ಶಿಬಿರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಟಿ.ಜಿ ಹೆಗ್ಡೆ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.