ರಾಷ್ಟ್ರೀಯ

ಗೋದಾಮಿನಲ್ಲಿ ಬೆಂಕಿ ಅವಘಡ – ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ‌ಇಂದು ಮುಂಜಾನೆ ಹೈದರಾಬಾದ್‌ನ ಸ್ಕ್ರ್ಯಾಪ್ ಗೋಡೌನ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 11 ಮಂದಿ ಸಜೀವ ದಹನಗೊಂಡಿದ್ದು, ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಇನ್ನು ಹೈದರಾಬಾದ್‌ನ ಭೋಯಿಗುಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದ್ದು, ಮೃತಪಟ್ಟವರ ಕುಟುಂಬಗಳೊಂದಿಗೆ ನಾವಿದ್ದೇವೆ. ಅವರ ಕುಟುಂಬಸ್ಥರಿಗೆ ತಲಾ 2 ಲಕ್ಷ ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!