ಕರಾವಳಿ
ಬ್ರಹ್ಮಾವರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ.!

ಬ್ರಹ್ಮಾವರ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ತಗ್ಗುಪ್ರದೇಶಕ್ಕೆ ಉರುಳಿಬಿದ್ದ ಘಟನೆ ಉಪ್ಪೂರು ಕೆ.ಜಿ. ರೋಡ್ ಬಳಿ ಮಂಗಳವಾರ ಸಂಜೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಟುಂಬಸ್ಥರು ಕುಂದಾಪುರದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಉಡುಪಿಗೆ ವಾಪಾಸು ಬರುತ್ತಿದ್ದರು. ಈ ವೇಳೆ ಉಪ್ಪೂರು
ಕೆ ಜಿ ರೋಡ್ ಬಳಿ ಈ ದುರ್ಘಟನೆ ನಡೆದಿದೆ. ಹೆದ್ದಾರಿಯಿಂದ ಕೆಳಗೆ ಬಿದ್ದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬ್ರಹ್ಮಾವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.