ಕರಾವಳಿ
ಭಾರತೀಯ ಜನತಾ ಪಾರ್ಟಿ ಉಡುಪಿ ವತಿಯಿಂದ ದಿll ಎ. ಗೋಪಾಲಕೃಷ್ಣ ಕೊಡ್ಗಿ ಅವರ ಶ್ರದ್ಧಾಂಜಲಿ ಸಭೆ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ದಿನಾಂಕ 20-06-2022 ರಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಬಿಜೆಪಿ ಹಿರಿಯ ನಾಯಕ ದಿll ಎ. ಗೋಪಾಲಕೃಷ್ಣ ಕೊಡ್ಗಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.