ರಾಜ್ಯ
ಹಿಜಾಬ್ ವಿವಾದ: ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆಯೊಡ್ಡಿದ ಮತ್ತೊಬ್ಬ ಆರೋಪಿ ಸೆರೆ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ರಾಜ್ಯ ಹೈಕೋರ್ಟಿನ ಮೂವರು ನ್ಯಾಯಮೂರ್ತಿಗಳಿಗೆ ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ.
ಈ ಹಿಂದೆ ಬೆಂಗಳೂರು ಪೊಲೀಸರು ಕೋವಾ ರಹಮತುಲ್ಲಾ ಎಂಬ ಆರೋಪಿಯನ್ನು ಬಂಧಿಸಿದ್ದರು. ಆರೋಪಿ ರಹಮತುಲ್ಲಾ ಬಹಿರಂಗವಾಗಿ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಲಾಗಿದೆ