ಕರಾವಳಿ
ನೆಲ್ಯಾಡಿ: ಉದನೆಯಲ್ಲಿ ಗಣಪತಿ ಕಟ್ಟೆ ದ್ವಂಸ ಪ್ರಕರಣ; 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು!

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉದನೆ ಬಳಿಯ ಗಣಪತಿ ಕಟ್ಟೆಯ ಮೇಲೆ ಕಲ್ಲು ಎತ್ತಿ ಹಾಕಿ ಹಾನಿ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಒಬ್ಬಾತನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ ಗರ್ನಿಯಾ ನಿವಾಸಿ ರವೀಂದ್ರ ಕುಮಾರ್ (25) ಎನ್ನಲಾಗಿದೆ
ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ವೇಳೆ ಆರೋಪಿಯು ಬಾಳಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿರುವುದು ಕಂಡುಬಂದಿತ್ತು. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, 24 ಗಂಟೆಗಳ ಅವಧಿಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.