ಕರಾವಳಿ

ಮಾ. 29- ಇಂದು ಉಡುಪಿಯಲ್ಲಿ ಉದ್ಯೋಗ ಮೇಳ

ಉಡುಪಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಉಡುಪಿ ಐ.ಎಮ್.ಸಿ, ಕೈಗಾರಿಕಾ ತರಬೇತಿ ಸಂಸ್ಥೆ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಇಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತ್ತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ಕನಿಷ್ಠ ಮೂರು ರೆಸ್ಯೂಮ್ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಬಹುದಾಗಿದೆ.

ಆನ್‌ಲೈನ್ ನೋಂದಣಿಗಾಗಿ http://udupi.nic.in ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9739691294, 9449943882, 9901481729 ಮತ್ತು 9743278151 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!