ಕರಾವಳಿ
ಬಂಟ್ವಾಳ: ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಓರ್ವ ಸಾವು, !

ಬಂಟ್ವಾಳ: ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವು, ೭ ಮಂದಿ ಗಾಯಗೊಂಡ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (೮೫ ) ಎನ್ನಲಾಗಿದೆ.
ಆಟೋರಿಕ್ಷಾವು ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಬರುತ್ತಿದ್ದ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಘಟನೆಯಲ್ಲಿ ತೀವ್ರ ಗಾಯಗೊಂಡ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಇನ್ನುಳಿದವರು ಅಲ್ಪಸ್ವಲ್ಪ ಗಾಯಗೊಂಡಿದ್ದು ಅವರನ್ನು ಬಂಟ್ವಾಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.