ಕರಾವಳಿ
ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾರಂಭೋತ್ಸವ

ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಗಮಂಡಲೋತ್ಸವ 08-04-2022 ರಿಂದ 11-04-2022 ರ ವರೆಗೆ ನಡೆಯಲಿದ್ದು, ಇಂದು ದಿನಾಂಕ 08-04-2022 ರಂದು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾರಂಭೋತ್ಸವ ದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಪ್ರಸಿದ್ಧ ವಾಗ್ಮಿ ಮತ್ತು ಚಿಂತಕರಾದ ಚಕ್ರವರ್ತಿ ಸೂಲಿಬೆಲೆ, ಆನೆಗುಡ್ಡೆ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸೂರ್ಯನಾರಾಯಣ ಉಪಾಧ್ಯ, ನಾಗಪಾತ್ರಿಗಳು, ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ಸಾಮಗ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಗೀತಾ ಶೇಟ್ ಉಪಸ್ಥಿತರಿದ್ದರು.