ಉಡುಪಿ ಬನ್ನಂಜೆಯ ನೂತನ ಕ.ರಾ.ರ.ಸಾ. ನಿಗಮದ ಬಸ್ ನಿಲ್ದಾಣಕ್ಕೆ “ಡಾll ವಿ. ಎಸ್. ಆಚಾರ್ಯ ಬಸ್ಸು ನಿಲ್ದಾಣ” ಎಂದು ನಾಮಕರಣ

ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ಬಸ್ಸು ನಿಲ್ದಾಣಕ್ಕೆ “ಡಾll ವಿ. ಎಸ್. ಆಚಾರ್ಯ ಬಸ್ಸು ನಿಲ್ದಾಣ” ಎಂದು ನಾಮಕರಣ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ನೂತನ ಬಸ್ ನಿಲ್ದಾಣವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರು ದಿನಾಂಕ 11-04-2022 ರಂದು ಅಪರಾಹ್ನ 3.00 ಗಂಟೆಗೆ ಉದ್ಘಾಟಿಸಲಿದ್ದಾರೆ. ಈ ಬಸ್ ನಿಲ್ದಾಣಕ್ಕೆ “ಡಾll ವಿ. ಎಸ್. ಆಚಾರ್ಯ ಬಸ್ ನಿಲ್ದಾಣ” ಎಂದು ನಾಮಕರಣ ಮಾಡಲು ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಮನವಿಯಂತೆ ಜಿಲ್ಲಾಧಿಕಾರಿಯವರ ಮುಖಾಂತರ ಸಲ್ಲಿಸಿರುವ ಪ್ರಸ್ತಾವನೆಗೆ ಕ.ರಾ.ರ.ಸಾ. ನಿಗಮದ ನಿರ್ದೇಶಕರ ಮಂಡಳಿ ಸಭೆಯು ನೀಡಿರುವ ಅನುಮೋದನೆಗೆ ಮಾನ್ಯ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿ ಸರ್ಕಾರ “ಡಾll ವಿ. ಎಸ್. ಆಚಾರ್ಯ ಬಸ್ ನಿಲ್ದಾಣ” ಎಂದು ನಾಮಕರಣ ಮಾಡಿ ಆದೇಶಿಸಿದೆ.
ಮಾನ್ಯ ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಶ್ರೀರಾಮುಲು ಅವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ರಘುಪತಿ ಭಟ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.