ವಿಸ್ತಾರಕ ಯೋಜನೆ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣಗೈದ ಕೋಟ

ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂದಟ್ಟು ಮತ್ತು ಪಡುಕರೆಯ 4 ಮತ್ತು 5 ನೇ ವಾರ್ಡಿನ ಬಿಜೆಪಿ ಬೂತ್ ಗಳ ಅಧ್ಯಕ್ಷರ ಮನೆಯಲ್ಲಿ ಬೂತ್ ಅಧ್ಯಕ್ಷರ ನಾಮ ಫಲಕವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು.
ವಿಸ್ತಾರಕ ಅಭಿಯಾನದ ಅಂಗವಾಗಿ ‘ಸಶಕ್ತ ಬೂತ್ – ಸದೃಢ ಭಾರತ’ ಪರಿಕಲ್ಪನೆಯಡಿ ಬೂತ್ ಸಮಿತಿಯ ಅಧ್ಯಯನ ಹಾಗೂ ಪರಿಶೀಲನಾ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕೋಟತಟ್ಟು ಶಕ್ತಿಕೇಂದ್ರದ ವಿಸ್ತಾರಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಿಜೆಪಿ ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರಿ, ಕೋಟತಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೊದ್ ಹಂದೆ, ನೂತನ ಬೂತ್ ಅಧ್ಯಕ್ಷರುಗಳಾದ ಪ್ರಭಾಕರ ಪೂಜಾರಿ ಹಂದಟ್ಟು, ರಾಮ ಎಮ್. ಬಂಗೇರ, ರಮಾನಂದ ಮೆಂಡನ್ ಹಾಗೂ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.