ರಾಜ್ಯ
ಮೇಕೆದಾಟು ಯೋಜನೆ : ಕಾನೂನು ಸಮರಕ್ಕೆ ಮುಂದಾದ ಕರ್ನಾಟಕ

ಪರಿಸರಕ್ಕೆ ಹಾನಿಯಾಗುವಂತೆ ಅಕ್ರಮವಾಗಿ ನಡೆಯುತ್ತಿರುವ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಲು ಎನ್‌ಜಿಟಿ ಜಂಟಿ ಸಮಿತಿಯನ್ನು ರಚನೆ ಮಾಡಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ತಜ್ಞರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಆದೇಶದ ಬಗ್ಗೆ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಈ ಕುರಿತು ಮಾತನಾಡಿ, ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ವಿಷಯಕ್ಕೆ ಸಂಬಂಧ ಪರಿಶೀಲಿಸಲು ಸಮಿತಿ ರಚಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶವನ್ನು ಪ್ರಶ್ನಿಸಲಾಗುತ್ತದೆ ಎಂದು ಹೇಳಿದ್ದಾರೆ.