ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ..!

ಟೊರೊಂಟೋ,: ಕೆನಡಾದ ಟೊರೊಂಟೋದ ಬಳಿಯ ಶೆರ್ಬೋರ್ನ್ ಸಬ್ ವೇ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು 21 ವರ್ಷದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ.
ಸೆನೆಕಾ ಕಾಲೇಜಿನ ಮೊದಲ ಸೆಮಿಸ್ಟರ್ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿ ವಾಸುದೇವ್‌ಗೆ ಗುಂಡು ಹಾರಿಸಿದ್ದು ಏಕೆ ಅಥವಾ ಯಾರು ಎಂದು ತಿಳಿದುಬಂದಿಲ್ಲ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಿದ್ರೂ ಪ್ರಯೋಜನವಾಗಲಿಲ್ಲ. ಘಟನೆ ನಡೆದ ಸ್ಥಳದಲ್ಲಿರೋ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರತ್ಯಕ್ಷದರ್ಶಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಹಂತಕರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೊಲೆ ಹಿಂದಿನ ಕಾರಣಗಳು ಸಹ ಪತ್ತೆಯಾಗಿಲ್ಲ. ಭಾರತೀಯ ವಿದ್ಯಾರ್ಥಿಯನ್ನು ಹತ್ಯೆಗೈದಿರುವುದು ಅತ್ಯಂತ ಆಘಾತಕಾರಿ ಮತ್ತು ದುರದೃಷ್ಟಕರವೆಂದು ಟೊರೊಂಟೋದಲ್ಲಿರು ಭಾರತದ ಕಾನ್ಸುಲೇಟ್ ಅಧಿಕಾರಿ ವಿಷಾದ ವ್ಯಕ್ತಪಡಿಸಿದ್ದಾರೆ. ಕಾರ್ತಿಕ್ ಮೃತದೇಹವನ್ನು ಕುಟುಂಬಸ್ಥರಿಗೆ ತಲುಪಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹಂತಕನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಟೊರೆಂಟೋ ಪೊಲೀಸರು ತಿಳಿಸಿದ್ದಾರೆ