ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ

ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲ ಇದರ ಪುನರ್ ಪತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ದಿನಾಂಕ 01-04-2022 ರಂದು ಆರಂಭಗೊಂಡಿದ್ದು, 15-04-2022 ರ ವರೆಗೆ ನಡೆಯಲಿದೆ. ಇಂದು ದಿನಾಂಕ 11-04-2022 ರಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ದೇವಸ್ಥಾನಕ್ಕೆ ಭೇಟಿ ನೀಡಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಶ್ರೀರಾಮುಲು, ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್ ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ ವೈ, ನಾಡೋಜ ಡಾll. ಜಿ ಶಂಕರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.