ಕರಾವಳಿ
ಮಂಗಳೂರು : ಪುಟ್ ಪಾತ್ ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಹರಿದ ಕಾರು

ಮಂಗಳೂರು: ಪುಟ್ ಪಾತ್ ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರು ಹರಿದ ಘಟನೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಹೊರ ಭಾಗದಲ್ಲಿ ನಡೆದಿದೆ.
ಹತ್ತರಿಂದ ಹದಿನೈದು ಮಂದಿ ಹೊರರಾಜ್ಯದ ಕಾರ್ಮಿಕರು ಫುಟ್ ಪಾತ್ ನಲ್ಲಿ ಮಲಗಿದ್ದರು ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಇಬ್ಬರ ಮೇಲೆ ಕಾರು ಹರಿದಿದೆ.
ಕಾರ್ಮಿಕರಿಗೆ ಅಲ್ಪ ಪ್ರಮಾಣದ ಗಾಯವಾದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.