ಅಕ್ರಮವಾಗಿ ಭಾರತದ ದಾಖಲೆ ಹೊಂದಿದ್ದ ಬಾಂಗ್ಲಾ ಯುವಕ ಪೊಲೀಸರ ವಶಕೇ

ಬೆಂಗಳೂರು : ಬಾಂಗ್ಲಾ ಯುವಕನೋರ್ವ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದಲ್ಲದೆ, ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿಗಳನ್ನೂ ಮಾಡಿಸಿಕೊಂಡ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಸದ್ಯ ಈತ ಪೊಲೀಸರ ಅತಿಥಿಯಾಗಿದ್ದಾನೆ.
ಅಕ್ರಮವಾಗಿ 2020ರಲ್ಲಿ ಭಾರತಕ್ಕೆ ನುಸುಳಿದ್ದ ಅಯಾನ್ ಎಂಬ ಬಾಂಗ್ಲಾ ಯುವಕ ನಕಲಿ ದಾಖಲೆ ಪತ್ರಗಳನ್ನು ನೀಡಿ ಭಾರತದ ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ಮಾಡಿಸಿಕೊಂಡಿದ್ದ. ಅಲ್ಲದೆ, ಈ ದಾಖಲೆಗಳ ಆಧಾರದ ಮೇಲೆ ಪಾಸ್ಪೋರ್ಟ್ ಕೂಡ ಮಾಡಿಸಿಕೊಂಡಿದ್ದ.
ಆರಂಭದಲಲ್‌ಇ ಅಗರ್ತಲಾದಲ್ಲಿ ನೆಲೆಸಿದ್ದ ಈತ ಅಲ್ಲಿಯೇ ಎಲ್ಲಾ ಗುರುತಿನ ಚೀಟಿಗಳನ್ನು ಮಾಡಿಸಿಕೊಂಡಿದ್ದ ಎನ್ನಲಾಗಿದೆ, ಏಪ್ರಿಲ್ 16ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ನಿಲ್ದಾಣಕ್ಕೆ ಹೋಗಿದ್ದ. ಈ ವೇಳೆ ಆತನ ಅನುಮಾನಾಸ್ಪದ ನಡವಳಿಕೆಯಿಂದ ಅನುಮಾನಗೊಂಡ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಿಸಿದಾಗ ನಕಲಿ ದಾಖಲೆ ವಿಚಾರ ಗೊತ್ತಾಗಿದೆ. ತತ್‌ಕ್ಷಣ ಇಮಿಗ್ರೇಷನ್ ಅಧಿಕಾರಿಗಳು ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಂದು ತಿಳಿದುಬಂದಿದೆ.