ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ ಉಡುಪಿ, ರೋಟರಿ ಮಿಡ್ ಟೌನ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ದಿನಾಂಕ 23-04-2022 ರಂದು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾದ “ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ” ದ ಅಧ್ಯಕ್ಷತೆ ವಹಿಸಿದ ಶಾಸಕ ಶ್ರೀ ಕೆ. ರಘುಪತಿ ಭಟ್ ಶುಭಹಾರೈಸಿ ಸಾರ್ವಜನಿಕರು ಆರೋಗ್ಯ ಮೇಳದ ಪ್ರಯೋಜನ ಪಡೆದುಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೇರಿಗಾರ್, ತಾಲೂಕು ಆರೋಗ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು.