ರಾಜ್ಯ
ಪರಿಶಿಷ್ಟ ಜಾತಿ, ಪಂಗಡಕ್ಕೆ 75, ಯುನಿಟ್ ಉಚಿತ ವಿದ್ಯುತ್: ಸಿ ಎಂ ಘೋಷಣೆ

ಬಾಗಲಕೋಟೆ: ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜ್ಯದಲ್ಲಿ ಉಡುಗೊರೆ ಪರ್ವ ಆರಂಭವಾಗಿದೆ. ರಾಜ್ಯದಲ್ಲಿ
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಉಚಿತ ವಿದ್ಯುತ್
ಪೂರೈಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಬಾಗಲ ಕೋಟೆ ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದಾಗಿ
ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದರು.
ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ದೆಹಲಿ
ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್, ದೆಹಲಿಯಲ್ಲಿ
ಉಚಿತ ವಿದ್ಯುತ್ ಪೂರೈಸುವುದನ್ನು ಪ್ರಮುಖವಾಗಿ
ಪ್ರಸ್ತಾಪಿಸಿದ್ದರು.