ಕರಾವಳಿ
ಉಡುಪಿ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ ಹಣ ಕಳವಿಗೆ ವಿಫಲ ಯತ್ನ…!

ಉಡುಪಿ : ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ ಹಣ ಕಳವಿಗೆ ವಿಫಲ ಯತ್ನ ನಡೆದಿದೆ. ಮಾ.7 ಹಾಗೂ ಮಾ.8 ರ ನಡುವಿನ ಅವಧಿಯಲ್ಲಿ ರಾತ್ರಿ ವೇಳೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್‌ನ ಕೆನರಾ ಬ್ಯಾಂಕ್ ಎಟಿಎಂ ಗೆ ನುಗ್ಗಿದ ಕಳ್ಳರು ಹಣವನ್ನು ಕಳವು ಮಾಡುವ ಉದ್ದೇಶದಿಂದ ಎಟಿಎಂ ಲಾಕ ಡೋರ್‌ನ್ನು ಮುರಿದು ಹಣ ಕಳವು ಮಾಡಲು ಪ್ರಯತ್ನಿಸಿದ್ದಾರೆ.
ಆದರೆ ಕಳ್ಳರ ಕೃತ್ಯ ಫಲಿಸದಾಗ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಎಲೆಕ್ಟ್ರಾನಿಕ್ ಪೇಮೆಂಟ್ ಸರ್ವಿಸ್ ಲಿ. ಸಂಸ್ಥೆ ಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಗಿರುವ ಸೈನಲ್ ಡಿಸೋಜಾ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.