ರಾಜ್ಯ

ಟೈರ್ ಬದಲಾಯಿಸುತ್ತಿದ್ದ ವೇಳೆ ಟ್ಯಾಂಕರ್ ಡಿಕ್ಕಿ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಸಿದ್ದವ್ವನ ಹಳ್ಳಿ ಬಳಿ ಈ ದುರಂತ ಸಂಭವಿಸಿದೆ.

ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರಿನ ಟೈರ್ ಪಂಕ್ಚರ್ ಆಗಿತ್ತು. ರಸ್ತೆ ಬದಿಯಲ್ಲಿ ಟೈರ್ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಕ್ಯಾಂಟರ್ ಬಳಿ ನಿಂತಿದ್ದ ನಾಲ್ಕು ಮಂದಿಯ ಮೇಲೆ ಹರಿದು ಹೋಗಿದೆ.

ಮೃತಪಟ್ಟವರನ್ನು ಹುಲುಗಪ್ಪ, ಮಂಜುನಾಥ್ , ಸಂಜಯ್ ಮತ್ತು ಶರಣಪ್ಪ ಎಂದು ಗುರುತಿಸಲಾಗಿದೆ. ಕ್ಯಾಂಟರ್ ನಲ್ಲಿ ಈರುಳ್ಳಿ ಸಾಗಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!