ರಾಜ್ಯ

ಮೇ.15ರೊಳಗೆ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು : ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವೂ ಮೇ.15ರೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಮೊದಲು ಮೇ.12ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿತ್ತು. ಆದರೆ ಸರ್ಕಾರಿ ರಜೆಗಳು ಎದುರಾದ ಹಿನ್ನಲೆಯಲ್ಲಿ ಮೌಲ್ಯ ಮಾಪನ ಕೊಂಚ ವಿಳಂಬವಾಗಿರುವ ಕಾರಣ ಮೇ.15ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೇಳಿದೆ.

2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.73 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿಕೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!