ರಾಷ್ಟ್ರೀಯ
ಇಂದಿನ ಕೋರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,205 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 31 ಮಂದಿ ಅಸುನೀಗಿದ್ದಾರೆ.
ದೇಶದಲ್ಲಿ ಈಗ ಒಟ್ಟು ಕೋರೋನಾ ಸೋಂಕು ಪ್ರಕರಣಗಳ ಸಂಖ್ಯೆ 4,30,88,118 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,509ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈವರೆಗೆ ಒಟ್ಟು 5,23,920 ಜನರು
ಮೃತಪಟ್ಟಿದ್ದಾರೆ. 24 ಗಂಟೆಗಳಲ್ಲಿ 4,79,208 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ. ಈವರೆಗೆ ಒಟ್ಟು 189 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.
ದೈನಂದಿನ ಪಾಸಿಟಿವಿಟಿ ದರ ಶೇ 1.07ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.70ರಷ್ಟಿದೆ. 2,802 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು,
ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,44,689
ತಲುಪಿದೆ.