ರಾಜ್ಯ
10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ಎಂದು ಗುರುತಿಸಲಾಗಿದೆ.
ಆತ್ಮಿಕಾ ಅವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಇಂದು ಮನೆಮಂದಿ ಕೆಲಸಕ್ಕೆ ಹೋಗಿದ್ದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.