ಬೈಂದೂರು ಪೊಲೀಸರಿಂದ ಕುಖ್ಯಾತ ದರೋಡೆಕೋರನ ಬಂಧನ

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಅನೇಕ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರನನ್ನು ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದ ಅಪರಾಧ ಪತ್ತೆ ದಳದ ತಂಡ ಮುಂಬಯಿ ಬಳಿಯ ಕೇಂದ್ರಾಡಳಿತ ಪ್ರದೇಶವಾದ ದಮನ್ ಎಂಬಲ್ಲಿ ಬಂಧಿಸಿ ಕರೆತಂದಿದ್ದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರಿಂದ ಬಂಧನವಾದ ಆರೋಪಿ ಮೂಲತಃ ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ಪ್ರಸ್ತುತ ಮಹಾರಾಷ್ಟ್ರದಲ್ಲಿ ವಾಸವಿರುವ ವಿಜಯ್ (48) ಬಂಧಿತ ಆರೋಪಿಯಾಗಿದ್ದು ಈತನಿಗೆ ಮೇ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ ಎನ್ನಲಾಗಿದೆ.
ಈ ಬಂಧಿತ ಆರೋಪಿಯಿಂದ 24.4 ಗ್ರಾಂ ತೂಕದ ಒಂದು ಚಿನ್ನದ ಸರ, 38.6 ಗ್ರಾಂ ತೂಕದ ಕರಿಮಣಿ ಸರ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್, ಮೊಬೈಲ್ ಸಹಿತ 3,25,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.