ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2827 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 4,31,13,413ಕ್ಕೆ ಏರಿಕೆ ಕಂಡಿದೆ.
ದೇಶದಲ್ಲಿ ಕಳೆದೊಂದು ದಿನದಲ್ಲಿ 24 ಮಂದಿ
ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ
ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆಯು 5,24,181 ಆಗಿದೆ.
ಕಳೆದ 24 ಗಂಟೆಗಳಲ್ಲಿ 3230 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಟಾರ್ಜ್ ಆಗಿದ್ದಾರೆ.ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 19,067 ಆಗಿದೆ. ದೇಶದಲ್ಲಿ ಕೊರೊನಾ ರಿಕವರಿ ದರವು 98.74
ಪ್ರತಿಶತ ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.