ವಿಶೇಷ ಲೇಖನಗಳು

ವಿಕಲಚೇತನರಿಗೆ ವಿವಿಧ ಯೋಜನೆ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗಿರುವ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ
ದೈನಂದಿನ ಚಟುವಟಿಕೆಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್‌ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ.50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿ-ಚಕ್ರ ವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲ ಮತ್ತು 2 ನೇ ಮಗುವಿನ ಪಾಲನೆಗೆ ಶಿಶುಪಾಲನಾ ಭತ್ಯೆ, ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆ ಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬೈಲ್ ಕಿಟ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳಿಗೆ ಅಂಗವಿಕಲರಿಸಿದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ
ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ
ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574810/ 2574811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!