ಕರಾವಳಿ
ಮಂಗಳೂರು: ಭಾರೀ ಮಳೆ – ದ.ಕ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ; ಡಾ. ರಾಜೇಂದ್ರ ಕೆ.ವಿ
ಮಂಗಳೂರು : ನಿರಂತರ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ. ಈ ನಡುವೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.