ಕರಾವಳಿ

2010 ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರ ಬಾವಿಯ ಬಳಿಯಿರುವ ಪಾರ್ಕ್‍ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಮೇ.22ರ ಭಾನುವಾರ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರೆ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!