ಅಬಕಾರಿ ಸುಂಕ ಕಡಿತದಿಂದ ರಾಜ್ಯಗಳ ಆದಾಯಕ್ಕೆ ನಷ್ಟವಿಲ್ಲ’ -ನಿರ್ಮಲಾ ಸೀತಾರಾಮನ್
ನವದೆಹಲಿ : ಇಂಧನದ ಮೇಲಿನ ಕೇಂದ್ರ ಅಬಕಾರಿ ಸುಂಕ ಕಡಿತದಿಂದ ರಾಜ್ಯಗಳ ಪಾಲಿನ ಆದಾಯಕ್ಕೆ ನಷ್ಟವಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರಗಳಿಗೆ ಸ್ಪಷ್ಟನೆ ನೀಡಿರುವ ಅವರು, ರಸ್ತೆ ಮತ್ತು ಮೂಲಸೌಕರ್ಯ ಸೆಸ್ನಲ್ಲಿ ಕಡಿತ ಮಾಡಿರುವುದರಿಂದ ಈ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಬೇಕಾಗುತ್ತದೆ, ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ ಎಂದಿದ್ದಾರೆ.
ಇನ್ನು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವು ನಾಲ್ಕು ಘಟಕಗಳನ್ನು ಹೊಂದಿದ್ದು, ಮೂಲ ಅಬಕಾರಿ ಸುಂಕ, ವಿಶೇಷ ಹೆಚ್ಚುವರಿ ಅಬಕಾರಿ ಸುಂಕ, ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಮತ್ತು ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಗಳಾಗಿದ್ದು,ಇದರಲ್ಲಿ ಮೂಲ ಅಬಕಾರಿ ಸುಂಕವನ್ನು ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಹಂಚಿಕೊಳ್ಳಬಹುದು. ಆದರೆ ಅಬಕಾರಿ ಸುಂಕ, ರಸ್ತೆ ಮತ್ತು ಮೂಲಸೌಕರ್ಯ ಸೆಸ್ ಮತ್ತು ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.