ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಗೆ ಬೀಜಧನ ಚೆಕ್ ವಿತರಣೆ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಹಯೋಗದಲ್ಲಿ ಇಂದು ದಿನಾಂಕ 23-05-2022 ರಂದು ಮಣಿಪಾಲ ರಜತಾದ್ರಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ “ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀಶಕ್ತಿ ಗುಂಪುಗಳಿಗೆ ಬೀಜಧನ ಚೆಕ್ ವಿತರಣೆ ಕಾರ್ಯಕ್ರಮ”ದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಸ್ವ-ಸಹಾಯ ಗುಂಪುಗಳಿಗೆ ರೂ. 1.00 ಲಕ್ಷ ಚೆಕ್ ಸಾಂಕೇತಿಕವಾಗಿ ವಿತರಿಸಲಾಯಿತು. ಜಿಲ್ಲೆಯಲ್ಲಿ ಒಟ್ಟು 140 ಸ್ವ-ಸಹಾಯ ಗುಂಪುಗಳಿಗೆ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಬಾಬು ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೀಣಾ ಉಪಸ್ಥಿತರಿದ್ದರು.