ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ
2,022 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 46 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು
ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ
ಸಾವನ್ನಪ್ಪಿರುವವರ ಸಂಖ್ಯೆ 5,24,459ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 14,832ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,099 ಮಂದಿ ಗುಣಮುಖರಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,25,99,102ಕ್ಕೆ
ತಲುಪಿದೆ. ದೇಶದಲ್ಲಿ 2,94,812 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 84,70,92,226 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಈವರೆಗೆ 1,92,38,45,615 ಜನರಿಗೆ ಲಸಿಕೆಯನ್ನು
ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ
ತಿಳಿಸಿದೆ.