ಕರಾವಳಿ
ಅನಿರ್ದಿಷ್ಟಾವಧಿಯವರೆಗೆ ಪ್ರಯಾಣಿಕರ ರೈಲು ಸಂಚಾರ ಸ್ಥಗಿತ.

ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮುಂದಿನ ಸೂಚನೆ ಬರುವವರೆಗೂ ಎಲ್ಲಾ ಸಾಮಾನ್ಯ ಪ್ರಯಾಣಿಕ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದುಎಂದು ಸೂಚನೆ ನೀಡಿದೆ. ಈ ಹಿಂದೆಯೇ ನಿರ್ಧರಿಸಿದಂತೆನಿಯಮಿತ ಪ್ರಯಾಣಿಕ ಮತ್ತು ಉಪನಗರ ರೈಲು ಸೇವೆಗಳನ್ನು ಮುಂದಿನ ಸೂಚನೆ ಬರುವವರೆಗೂ ಸ್ಥಗಿತಗೊಳಿಸ ಲಾಗುವುದು. 230 ವಿಶೇಷ ರೈಲುಗಳು ಸೇವೆಗಳು ಮಾತ್ರ ಮುಂದುವರೆಯಲಿವೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಸದ್ಯ ಸಂಚರಿಸುತ್ತಿರುವ 230 ವಿಶೇಷ ರೈಲುಗಳು ಚಾಲನೆಯಲ್ಲಿ ಮುಂದುವರಿಯಲಿವೆ. ವಿಶೇಷ ರೈಲುಗಳ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅಲ್ಲದೆ, ಅಗತ್ಯದ ಆಧಾರದ ಮೇಲೆ ಭವಿಷ್ಯದಲ್ಲಿ ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸುವ ಸಾಧ್ಯತೆ ಇದೆ. ಆದರೆ ಮುಂದಿನ ಸೂಚನೆ ಬರುವವರೆಗೂ ಎಲ್ಲಾ ಸಾಮಾನ್ಯ ಪ್ರಯಾಣಿಕ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಸೂಚನೆ ನೀಡಿದೆ.