ರಾಜ್ಯ
ತುಮಕೂರು ಲಾರಿಗಳ ನಡುವೆ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು

ತುಮಕೂರು: ಲಾರಿಗಳು ಪರಸ್ಪರ ಡಿಕ್ಕಿ ಹೊಡೆದ
ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,
ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ
ಗುಬ್ಬಿ ಪಟ್ಟಣದ ಹೊರವಲಯದ ಸಿಂಗೋನಹಳ್ಳಿ
ಸೇತುವೆ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ
ಬಂದ ಕೋಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ
ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು
ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು
ವಾಹನ ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.